ಅ.15ರಂದು ಹೊಸದುರ್ಗ ತಾಲ್ಲೂಕಿನ ಎಂ.ಮಲ್ಲಾಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ

 

 

 

 

ಚಿತ್ರದುರ್ಗ:chitrdaurga ಅಕ್ಟೋಬರ್13:
ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಎಂ.ಮಲ್ಲಾಪುರ ಗ್ರಾಮದಲ್ಲಿ ಇದೇ ಅಕ್ಟೋಬರ್ 15ರಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಹೂಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. (DC Kavitha s mannikere )
ಜಿಲ್ಲಾಧಿಕಾರಿಗಳು ಭೇಟಿ ನೀಡುವ ತಾಲ್ಲೂಕು ಹೊರತು ಪಡಿಸಿ ಉಳಿದ ತಾಲ್ಲೂಕಿನ ತಹಶೀಲ್ದಾರ್‍ರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಅಕ್ಟೋಬರ್ 15ರಂದು ಚಿತ್ರದುರ್ಗ ತಾಲ್ಲೂಕಿನ ಹಳೇಚೂರಿಪಾಪಯ್ಯನಹಟ್ಟಿ, ಚಳ್ಳಕೆರೆ ತಾಲ್ಲೂಕಿನ ದೊಡ್ಡೇರಿ, ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ, ಮೊಳಕಾಲ್ಮೂರು ತಾಲ್ಲೂಕಿನ ಫಕುರ್ತಿ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಬೋರೇನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

 

 

[t4b-ticker]

You May Also Like

More From Author

+ There are no comments

Add yours