ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

 

 

 

 

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ  ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮುಲಾಯಂ ಸಿಂಗ್ ಮೂರು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಸೇವೆ ಸಲ್ಲಿಸಿದ್ದರು.

 

 

10 ಬಾರಿ ವಿಧಾನಸಭಾ  ಸದಸ್ಯರಾಗಿ, ಏಳು ಬಾರಿ ಲೋಕಸಭಾ ಸದಸ್ಯರಾಗಿ, ಒಮ್ಮೆ ಭಾರತದ ರಕ್ಷಣಾ ಸಚಿವರಾಗಿ ಸಮರ್ಥವಾಗಿ  ಕೆಲಸ ನಿರ್ವಹಿಸಿದ್ದರು.

ಮುಲಾಯಂ ಸಿಂಗ್ ಯಾದವ್ ಅವರನ್ನು ಆಗಸ್ಟ್ 22 ರಿಂದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ವಾರದ ಹಿಂದೆ ಮುಲಾಯಂ ಅವರನ್ನು ತುರ್ತು ನಿಗಾ ಘಟಕದಲ್ಲಿ ಇಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

[t4b-ticker]

You May Also Like

More From Author

+ There are no comments

Add yours