ಅಂಡಿಂಜೆ: ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.)ದ ನೂತನ ಕಟ್ಟಡ ಕ್ಷೀರ ಸಮೃದ್ಧಿ ಇದರ ಉದ್ಘಾಟನೆಯು ಡಿ. 22ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಸಂಘದ ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ. ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ನೆರವೇರಿಸಲಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೂತನ ಸಂಘದ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಗೋದಾಮು ಕಟ್ಟಡದ ಉದ್ಘಾಟನೆಯನ್ನು ಒಕ್ಕೂಟದ ಉಪಾಧ್ಯಕ್ಷ ಉದಯ ಕೋಟ್ಯಾನ್ ನೆರವೇರಿಸಲಿದ್ದು, ನಿದೇರ್ಶಕರಾದ ಎಸ್ಬಿ ಜಯರಾಜ್ ಅವರು ನಾಮಫಲಕ ಅನಾವರಣಗೊಳಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಅಂಡಿಂಜೆ ಸಂಘದ ಅಧ್ಯಕ್ಷರಾದ ಮೋಹನ್ ಅಂಡಿಂಜೆ ವಹಿಸಲಿದ್ದು, ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಹಲವು ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.






