ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ

 

ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ
***************
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.01:
ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ರಾಜ್ಯದಾದ್ಯಂತ ಪೂರ್ಣಗೊಂಡಿರುವ 36789 ಮನೆಗಳ ಲೋಕಾರ್ಪಣೆ ಹಾಗೂ ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಸಮಾರಂಭ ಇದೇ ಮಾರ್ಚ್ 02 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರು ಕೆ.ಆರ್.ಪುರಂ ನಗರೇಶ್ವರ ನಾಗೇನಹಳ್ಳಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಚ್ರ್ಯುಯಲ್ ಮುಖಾಂತರ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರ ವ್ಯಾಪ್ತಿಯ 700 ಮನೆಗಳ ಲೋಕಾರ್ಪಣೆಯನ್ನು ಕೂಡ ಇದೇ ಸಂದರ್ಭದಲ್ಲಿ ಮಾಡುವರು.
ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಮನೆಗಳ ಲೋಕಾರ್ಪಣೆ, ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಜರುಗುವ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಸತಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್, ಮುಂತಾದವರು ಘನ ಉಪಸ್ಥಿತಿ ವಹಿಸುವರು.
ಚಳ್ಳಕೆರೆಯಲ್ಲಿ ವರ್ಚುಯಲ್ ಮೂಲಕ ಜರುಗುವ ಕಾರ್ಯಕ್ರಮದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಸಂಸದ ಎ.ನಾರಾಯಣಸ್ವಾಮಿ, ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕರೆ ಶಾಸಕ ಟಿ.ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಮನೆ ಹಂಚಿಕೆ, ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ  ಭಾಗವಹಿಸುವರು ಎಂದು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಚಿತ್ರದುರ್ಗ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ: 564 ವಿದ್ಯಾರ್ಥಿಗಳು ಗೈರು

[t4b-ticker]

You May Also Like

More From Author

+ There are no comments

Add yours