ವೇಣೂರು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವಾ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುವ ಸಾರ್ವಜಕ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆ ದೇವಸ್ಥಾನದ ವ್ಯವಸ್ಥಾನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಬ್ರೈಟ್ ಹೋರಿಜಾನ್ ಸ್ಕೂಲ್ ಇದರ ಚೇರ್ಮೆನ್ ಆಗಿರುವ ಡಾ. ಶರತ್ ಗೊರೆ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಅರವಿಂದ ಶೆಟ್ಟಿ, ಕೋಶಾಧಿಕಾರಿಯಾಗಿ ಸತೀಶ್ ಚಿಗುರು ಆಯ್ಕೆಯಾದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಮತ್ತು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕರಿಮಣೇಲು ಒಕ್ಕೂಟ ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಊರ ಪರವೂರ ಭಕ್ತಭಿಮಾನಿಗಳು ಭಾಗವಹಿಸಿದ್ದರು.




