ವೇಣೂರು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಚಿಗುರು, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ್ ಶೆಟ್ಟಿ, ದೇಲಂಪುರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರು, ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.






