ವೇಣೂರು: ಕರಿಮಣೇಲು ಗ್ರಾಮದ ದೇಲಂಪುರಿಯಲ್ಲಿರುವ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವದ ಪ್ರಯುಕ್ತ ಜ. 18ರಂದು ಬೆಳಿಗ್ಗೆ 9-00 ಗಂಟೆಯಿಂದ ಗ್ರಾಮಸ್ಥರಿಗೆ ವಿವಿಧ ಮನೋರಂಜನ ಸ್ಪರ್ಧೆ ಏರ್ಪಡಿಸಲಾಗಿದೆ.
ವಿದ್ಯಾರ್ಥಿಗಳಿಗೆ ರಂಗೋಲಿ, ಚಿತ್ರಕಲೆ, ಛದ್ಮವೇಷ ಹಾಗೂ ಭಕ್ತಿಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ಇದರಲ್ಲಿ ಭಕ್ತಿಗೀತೆ ಸ್ಪರ್ಧೆ ಮುಕ್ತವಾಗಿದೆ. ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ, ಪುರುಷರಿಗೆ ಲಿಂಬೆ ಚಮಚ ಓಟ, ಬಾಟಲ್ಗೆ ನೀರು ತುಂಬಿಸುವುದು ಹೀಗೆ ನಾನಾ ಬಗೆಯ ಮನೋರಂಜನೆ ಒದಗಿಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಅಲ್ಲದೆ ಮಹಿಳೆಯರಿಗೆ ಮತ್ತು ಪರುಷರಿಗೆ ಹಗ್ಗಜಗ್ಗಾಟ ಸ್ಪರ್ಧೆಯೂ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಪ್ರಕಟಣೆ ತಿಳಿಸಿದೆ.





