ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಕಾಲಮಿತಿಯೊಳಗೆ ಪರಿಹಾರ ವಿತರಣೆಗೆ ಕ್ರಮ: ಡಿಸಿ ಕವಿತಾ ಎಸ್.ಮನ್ನಿಕೇರಿ

 

ಚಿತ್ರದುರ್ಗ(chitrdaurga)ಅಕ್ಟೋಬರ್14:
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಉಂಟಾಗಿರುವ ಹಾನಿಗಳ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕಾಲಮಿತಿಯೊಳಗೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

ಇದೇ ಅಕ್ಟೋಬರ್ 20 ರವರೆಗೆ ರಾಜ್ಯಾದ್ಯಂತ ಹೆಚ್ಚಿನ ಮಳೆ ಬೀಳುವ ಸಂಭವವಿರುವುದರಿಂದ ಹೆಚ್ಚಿನ ಮಳೆಯಿಂದಾಗಿ ಹಾನಿಗೊಳಗಾಗುವ ಪ್ರದೇಶಗಳಲ್ಲಿ ತುರ್ತಾಗಿ ವಸ್ತುಸ್ಥಿತಿ ಪರಿಶೀಲಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಅಲ್ಲದೆ ಈಗಾಗಲೆ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ನಿಯಮಾನುಸಾರ ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ತಾಲ್ಲೂಕು ಆಡಳಿತಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿ, ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

(Delivery of compensation for rain damage within time frame)  ಹಿಂಗಾರು ಹಂಗಾಮಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಉಂಟಾಗಿರುವ ವಾಸದ ಮನೆಗಳು ಹಾನಿಯ ವಿವರಗಳನ್ನು ಆರ್‍ಜಿಹೆಚ್‍ಸಿಎಲ್ ಪೋರ್ಟಲ್‍ನಲ್ಲಿ ಅಳವಡಿಸಿ, ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ಪಾವತಿಸಬೇಕು.  ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ವಾಸದ ಮನೆಗಳಿಗೆ ಕೂಡಲೇ ಸರ್ಕಾರದ ಮಾರ್ಗಸೂಚಿ ಅನುಸಾರ ಪರಿಹಾರ ಮೊತ್ತ ಪಾವತಿ ಮಾಡಲು ಕ್ರಮ ವಹಿಸಬೇಕು. ಹೆಚ್ಚಿನ ಮಳೆಯಿಂದಾಗಿ ಹಾನಿಗೊಳಗಾಗಿರುವ ಬೆಳೆನಷ್ಟದ ವಿವರಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಹಾರ್ ತಂತ್ರಾಂಶದಲ್ಲಿ ಅಕ್ಟೋಬರ್ 25ರೊಳಗೆ ದಾಖಲಿಸಬೇಕು. ಹಿಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಉಂಟಾಗಿರುವ ಮಳೆ ಹಾನಿಯ ಬಗ್ಗೆ ತುರ್ತಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿ, ಹಾನಿಯ ಕುರಿತಾದ ಮಾಹಿತಿಯನ್ನು ಪರಿಹಾರ್ ತಂತ್ರಾಂಶದಲ್ಲಿ ಅಳವಡಿಸಬೇಕು.  ಹೆಚ್ಚಿನ ಮಳೆಯಿಂದಾಗಿ ಹಾನಿಗೊಳಗಾಗಿರುವ ಸಾರ್ವಜನಿಕರ ಆಸ್ತಿಪಾಸ್ತಿಗಳ ತುರ್ತು ದುರಸ್ತಿಯ ಬಗ್ಗೆ ಅನುಷ್ಠಾನ ಇಲಾಖೆಗಳ ಸೂಕ್ತ ಸಮನ್ವಯದೊಂದಿಗೆ ಪುನರ್ ಸ್ಥಾಪಿಸಲು ಅಗತ್ಯ ಪರಿಹಾರ ಕ್ರಮಗಳನ್ನು ಕಾಲಮಿತಿಯೊಳಗೆ  ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನು ಓದಿ:ಮರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ , ಮತ್ತಿಬ್ಬರು ವಿದ್ಯಾರ್ಥಿನಿಯರಿಂದ ಕೇಸ್ ದಾಖಲು

ಹೆಚ್ಚಿನ ಮಳೆಯಿಂದಾಗಿ ಹಾನಿಗೊಳಗಾಗಿರುವ ರಾಜ್ಯ ಹೆದ್ದಾರಿಗಳು, ಜಿಲ್ಲಾ ಮುಖ್ಯ ರಸ್ತೆಗಳು, ಗ್ರಾಮೀಣ ರಸ್ತೆಗಳ ದುರಸ್ತಿ ಬಗ್ಗೆ ಹಾನಿಯ ತೀವ್ರತೆಯನ್ನು ಅನುಸರಿಸಿ ಮೂರು ವರ್ಗಗಳಾಗಿ ವಿಂಗಡಿಸಲಾಗಿದ್ದು, ದುರಸ್ತಿ, ಪುನರ್ ನಿರ್ಮಾಣದ ಬಗ್ಗೆ ವರ್ಗೀಕರಣ ಹಾಗೂ ಆದ್ಯತೆಯನ್ನು ಸ್ಥಳೀಯ ಸಮುದಾಯಕ್ಕೆ ಉಂಟಾಗಿರುವ ತೊಂದರೆ ಮತ್ತು ರಸ್ತೆ ಸಂಪರ್ಕ ತೊಂದರೆಯನ್ನು ಆಧರಿಸಿ ವರ್ಗೀಕರಿಸಿ, ಅದರನ್ವಯ ತ್ವರಿತವಾಗಿ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಣ್ಣ ನೀರಾವರಿ, ಜಿಲ್ಲಾ ಪಂಚಾಯಿತಿ ಕೆರೆಗಳು: ನೀರಿನ ಶೇಖರಣೆ ಶೇ.50ಕ್ಕಿಂತ ಅಧಿಕವಿರುವ ಕೆರೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಭಿಯಂತರರು ಕೆರೆಗಳ ಸ್ಥಿರತೆಯ ಬಗ್ಗೆ ಮತ್ತು ದುರ್ಬಲ ಪ್ರದೇಶಗಳ ಬಗ್ಗೆ ಪರಿಶೀಲಿಸಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.
ದುರ್ಬಲ ಬಂಡ್‍ಗಳು, ಸ್ಲೂಸ್ ಗೇಟ್ ಸೇರಿದಂತೆ ನೀರು ಪೋಲಾಗುವ ಸ್ಥಳಗಳನ್ನು ಮರಳುಚೀಲ ಸೇರಿದಂತೆ ಅಗತ್ಯ ಕ್ರಮಗಳೊಂದಿಗೆ ಬಲಪಡಿಸಬೇಕು. ನೀರು ಹರಿವು ಸ್ಥಳಗಳಲ್ಲಿನ ತೊಂದರೆ ನಿವಾರಿಸಿ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡಬೇಕು ಎಂದು ಸಣ್ಣ ನೀರಾವರಿ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ತಾಕೀತು ಮಾಡಿದ್ದಾರೆ.
24ಗಂಟೆಯೊಳಗೆ ವಿದ್ಯುತ್ ಪೂರೈಕೆ ಪುನರ್‍ಸ್ಥಾಪನೆ: ಮಳೆಯಿಂದ ಹಾನಿಗೊಳಗಾದ ಟ್ರಾನ್ಸ್‍ಪಾರ್ಮರ್‍ಗಳನ್ನು ಹಾಗೂ ವಿದ್ಯುತ್ ಕಂಬಗಳನ್ನು ತಕ್ಷಣವೇ ದುರಸ್ತಿಪಡಿಸಿ 24 ಗಂಟೆಯೊಳಗಿಂತ ಕಡಿಮೆ ಅವಧಿಯೊಳಗೆ ವಿದ್ಯುತ್ ಪೂರೈಕೆಯನ್ನು ಪುನರ್‍ಸ್ಥಾಪಿಸಲೇಬೇಕು.  ಹಾಗೂ ಈ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಹೆಚ್ಚಿನ ಮಳೆಯ ಕಾರಣದಿಂದಾಗಿ ವಿದ್ಯುತ್ ಕಡಿತ ಮಾಡಬಾರದು ಎಂದು ಬೆಸ್ಕಾಂ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಹೆಚ್ಚಿನ ಮಳೆಯಿಂದಾಗಿ ಉಂಟಾಗಿರುವ ಹಾನಿಗಳು ಹಾಗೂ ಪರಿಹಾರ ಕಾರ್ಯಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ  ಕಳೆದ ಅಕ್ಟೋಬರ್ 13ರಂದು ಜರುಗಿದ ನಡೆದ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿರುವ ಸೂಚನೆಗಳನ್ನು ಅಧಿಕಾರಿಗಳು ಚಾಚು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
========

[t4b-ticker]

You May Also Like

More From Author

+ There are no comments

Add yours