ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಭಾರಿಗೆ ಗಡಿಪಾರು ಆದೇಶ ಮಾಡಲಾಗಿದೆ.
ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಅದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರೆಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ತಿಮರೋಡಿಗೆ ಮೊದಲೇ ಮಾಹಿತಿ ತಿಳಿದು ಮನೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.





