ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಇದೀಗ ಚಳಿ ಆವರಿಸಿದ್ದು, ಈ ನಡುವೆಯೇ ಮುಂದಿನ ಮೂರು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕೆಲವೆಡೆ ಚಳಿ ನಡುವೆಯೂ ಮಳೆಯಾಗಿದೆ. ಇನ್ನೈ ಇಂದು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮತ್ತೊಂದೆಡೆ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗೂ 17 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಗಳ ಅಲ್ಲಲ್ಲಿ ಪ್ರತ್ಯೇಕವಾಗಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಮುನ್ಸೂಚನೆ ನೀಡಿದೆ.









