ಕರ್ನಾಟಕದ ಕೆಲವೇ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ. ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್ಎಎಲ್, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ. ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್ಎಎಲ್, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.









