ಹೊಸಂಗಡಿ: ಇಲ್ಲಿಯ ಬಲ್ಲಂಗೇರಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ. 2 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಯೋಜನಾಧಿಕಾರಿಯವರಾದ ಅಶೋಕ್ ಬಿ. ಅವರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸೀತಾರಾಮ್ ರೈ ಅವರಿಗೆ ಡಿ.ಡಿ. ವಿತರಣೆ ಮಾಡಿ ಶುಭ ಹಾರೈಸಿದರು.





