ಧರ್ಮಸ್ಥಳ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ನ.15 ರಂದು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್ಗಳನ್ನು ವೀಕ್ಷಿಸಿದರು. ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುರ್ಯಗುತ್ತು, ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ಕುಮಾರ್, ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ. ಎನ್. ಜನಾರ್ದನ್, ಎಸ್ಡಿಎಂ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಜನಾರ್ದನ್, ಹೆಗ್ಗಡೆಯವರ ಆಪ್ತ ಸಹಾಯಕ ವೀರೂ ಶೆಟ್ಟಿ, ಅನಂತ ಭಟ್ ಮುಚ್ಚಿಮಲೆ, ಯತೀಶ್ ಬಳೆಂಜ ಮೊದಲಾದವರು ಭಾಗವಹಿಸಿದ್ದರು.









