ಡೀಸೆಲ್ ಎಂಜಿನ್‌ನೊಂದಿಗೆ ಮರಳಿ ಬಂದ ಜನಪ್ರಿಯ ಟೊಯೊಟಾ ಇನೋವಾ ಕ್ರಿಸ್ಟಾ : ಬುಕ್ಕಿಂಗ್ ಪ್ರಾರಂಭ

 

ಜನಪ್ರಿಯ ಕಾರು ತಯಾರಕ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (TKM) ಭಾರತೀಯ ಮಾರುಕಟ್ಟೆಯಲ್ಲಿ 2023ರ ಇನೋವಾ ಕ್ರಿಸ್ಟಾವನ್ನು ಮರು-ಪರಿಚಯಿಸಿದೆ. ಈ ಹೊಸ ಟೊಯೊಟಾ ಇನೋವಾ ಕ್ರಿಸ್ಟಾ (Toyota Innova Crysta) ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ.

ನವೀಕರಿಸಿದ ಇನೋವಾ ಕ್ರಿಸ್ಟಾ ಬೆಲೆಯನ್ನು ಮುಂಬರುವ ದಿನಗಳಲ್ಲಿ ಬಹಿರಂಗಪಡಿಸಲಿದೆ.

ಈ ಹೊಸ ಎಂಪಿವಿಯನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.50,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು.ಇತ್ತೀಚೆಗೆ ಬಿಡುಗಡೆಗೊಂಡ ಇನೋವಾ ಹೈಕ್ರಾಸ್ ಜೊತೆಗೆ ಇನ್ನೋವಾ ಕ್ರಿಸ್ಟಾ ಕಾರನ್ನು ಮಾರಾಟ ಮಾಡುವುದನ್ನು ಮುಂದುವರಿಸುತ್ತಾರೆ. 2005ರಲ್ಲಿ ಹೆಚ್ಚು ಜನಪ್ರಿಯವಾದ ಕ್ವಾಲಿಸ್ ಅನ್ನು ಬದಲಾಯಿಸಿ ಪ್ರೀಮಿಯಂ ಎಂಪಿವಿಯಾಗಿ ಟೊಯೊಟಾ ಇನೋವಾವನ್ನು ಪರಿಚಯಿಸಿದರು. ಅಂದಿನಿಂದ ಇಂದಿನವರೆಗೂ ಈ ಕಾರಿಗೆ ಭಾರೀ ಬೇಡಿಕೆಯನ್ನು ಹೊಂದಿದೆ. ಇದೇ ಕಾರಣದಿಂದ ಟೊಯೊಟಾ ಕಂಪನಿಯು ಡೀಸೆಲ್ ಎಂಜಿನ್ ನೊಂದಿಗೆ ಇನ್ನೋವಾ ಕ್ರಿಸ್ಟಾ ಕಾರನ್ನು ಮರಳಿ ತಂದಿದೆ.

2023ರ ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನಲ್ಲಿ ಲುಕ್ ಹೆಚ್ಚಾಗಿ ಬದಲಾಗದೆ ಉಳಿದಿದೆ, ಟೊಯೊಟಾ ಕಂಪನಿಯು ಬಿಡುಗಡೆ ಮಾಡಿದ ಚಿತ್ರದಲ್ಲಿ ಇನೋವಾ ಕ್ರಿಸ್ಟಾ ಕಾರು ಮೈಲ್ಡ್ ಫೇಸ್‌ಲಿಫ್ಟ್ ಅನ್ನು ಪಡೆದುಕೊಂಡಿದೆ. ಈ ಕಾರು ಹೆಚ್ಚು ಎಸ್‍ಯುವಿ ಶೈಲಿಯನ್ನು ನೀಡುವ ಪ್ರಯತ್ನದಲ್ಲಿ, ಟೊಯೊಟಾ ಮುಂಭಾಗದ ಫಾಸಿಕವನ್ನು ನವೀಕರಿಸಿದೆ. ಇದು ಈಗ ಸ್ವಲ್ಪ ಚಿಕ್ಕದಾದ ಮತ್ತು ಹೆಚ್ಚು ಪ್ರಮುಖವಾದ ಮುಂಭಾಗದ ಗ್ರಿಲ್‌ನೊಂದಿಗೆ ಬರುತ್ತದೆ, ಇದೇ ರೀತಿ ಮುಂಭಾಗದಲ್ಲಿ ಕೆಲವು ನವೀಕರಣಗಳನ್ನು ಮಾಡಲಾಗಿದೆ.

[t4b-ticker]

You May Also Like

More From Author

+ There are no comments

Add yours