ಬುದ್ಧಿಮಾಂದ್ಯ ಮಕ್ಕಳ ಮನೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಭೇಟಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.13:
ಜಿಲ್ಲೆಯಲ್ಲಿರುವ ಬುದ್ಧಿಮಾಂದ್ಯ ಮಕ್ಕಳ ಮನೆಗೆ ವೈದ್ಯರ ತಂಡ ಭೇಟಿ ನೀಡಿ, ಚಿಕಿತ್ಸೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಗೋನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಚ್ಚಬೋರನಹಟ್ಟಿ ಗ್ರಾಮದ ಬುದ್ಧಿಮಾಂದ್ಯ ಮಕ್ಕಳ ಮನೆಗೆ ಮಂಗಳವಾರ ಭೇಟಿ ನೀಡಿ, ಬುದ್ಧಿಮಾಂದ್ಯ ಮಕ್ಕಳ ಆರೈಕೆ ಹಾಗೂ ಆರೋಗ್ಯದ ಕುರಿತು ಮಾಹಿತಿ, ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಬುದ್ಧಿಮಾಂದ್ಯರಿಗೆ ಚಿಕಿತ್ಸೆಯ ಅವಶ್ಯಕತೆ ಇದ್ದಾಗಲೂ ವೈದ್ಯರ ತಂಡ ಭೇಟಿ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.
ಬುದ್ಧಿಮಾಂದ್ಯರ ಮನೆಗೆ ಭೇಟಿ ನೀಡಿ, ವೈದ್ಯರ ತಂಡ ಚಿಕಿತ್ಸೆ ಕೊಡಬೇಕು ಎಂಬ ಕಾನೂನು ಇದೆ. ಆದರೆ ಈ ಕಾನೂನನ್ನು ಸಾರ್ವಜನಿಕರು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿಲ್ಲ. ಈ ಹಿನ್ನಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಾಂಕೇತಿಕವಾಗಿ ಬುದ್ಧಿಮಾಂದ್ಯರ ಮನೆಗೆ ವೈದ್ಯರ ತಂಡದೊಂದಿಗೆ ಭೇಟಿ ನೀಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾನಸಿಕ ತಜ್ಞರಾದ ಶ್ರೀಧರ್ ಸೇರಿದಂತೆ ವೈದ್ಯರ ತಂಡ, ಬಚ್ಚಬೋರನಹಟ್ಟಿ ಗ್ರಾಮದ ಆಶಾ ಕಾರ್ಯಕರ್ತರಾದ ಉಮಾಕ್ಷಿ, ಬೋರಮ್ಮ ಇದ್ದರು

[t4b-ticker]

You May Also Like

More From Author

+ There are no comments

Add yours