ಮಾರ್ಚ್ 09ರಂದು ಜೆ.ಜೆ.ಹಳ್ಳಿಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.06:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗ್ರಾಮದ ನಾಡಕಚೇರಿ ಹತ್ತಿರದ ಗಣೇಶ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ 09ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ಮಾಹೆಯಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡು, ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಲಾಗುತ್ತದೆ.

ಇದನ್ನೂ ಓದಿ: ಚಳ್ಳಕೆರೆ ಜೆಡಿಎಸ್ ಗೆ ನೂತನ ಅಧ್ಯಕ್ಷರಾಗಿ ಪಿ.ತಿಪ್ಪೇಸ್ವಾಮಿ ನೇಮಕ.


ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours