ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡದ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಕ್ಕರ್

 

 

 

 

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ  ಘಟಪರ್ತಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಜಿಲ್ಲಾಡಳಿತ ಜನರ ಮನೆ ಬಾಗಿಲಿಗೆ ಎಂಬ ಘೋಷ ವಾಕ್ಯದೊಂದಿದೆ ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ಕಾರ್ಯಕ್ರಮಕ್ಕೆ ಖುದ್ದು ಜಿಲ್ಲಾಧಿಕಾರಿಗಳು ಭಾಗವಹಿಸಿ ಜನರೊಂದರೆ ಸಮಸ್ಯೆಗಳನ್ನು ಅಲಿಸಿ ಅದೇ ಗ್ರಾಮದಲ್ಲಿ ವಾಸ್ತವ್ಯ ಮಾಡುತ್ತಾರೆ. ಆದರೆ ಕಳೆದ ಎರಡ್ಮೂರು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾತ್ರ ಚಕರ್ ಹೊಡೆದು ಆರಾಮವಾಗಿದ್ದಾರೆ. ಜಿಲ್ಲಾಧಿಕಾರಿಗಳು ಇದ್ದರು ಸಹ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿಲ್ಲ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

 

 

ಎಲ್ಲಾ  ಹಳ್ಳಿಗಳಲ್ಲಿ   ಗ್ರಾಮದ ಜನರು ಅದು ಎಷ್ಟೆ ತಾಲೂಕು ಮಟ್ಟದ ಅಧಿಕಾರಿಗಳು ಮಾಹಿತಿ ನೀಡಿದರು ಜಿಲ್ಲಾ ಮಟ್ಟಕ್ಕೆ ಬಂದು  ಅಧಿಕಾರಿಗಳು ಭೇಟಿ ಮಾಡಿ ಮಾಹಿತಿ ಪಡೆಯುತ್ತಾರೆ.ಆದರೆ ಅಂತಹ ಗ್ರಾಮಗಳಲ್ಲಿ  ಸಮಸ್ಯೆಗಳನ್ನು ವಿಚಾರಿಸಿ ತಾಲೂಕು ಮಟ್ಟದಲ್ಲಿ ಬಗೆಹರಿಸಲಾಗದ ಹಲವು ಸಮಸ್ಯೆಗಳು ಜಿಲ್ಲಾ ಮಟ್ಟದಲ್ಲಿ ಬಗೆರಿಸಲಾಗುತ್ತದೆ. ಆದರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಏಕೆ ಜಿಲ್ಲಾಧಿಕಾರಿಗಳೊಂದಿಗೆ ಹಳ್ಳಿಗೆ ಆಗಮಿಸುತ್ತಿಲ್ಲ , ಗ್ರಾಮ ಅಂತ ಮೇಲೆ ಎಲ್ಲಾ ಸಮಸ್ಯೆ ಇದ್ದೆ ಇರುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ. ಇನ್ನಷ್ಟು ಸಮಸ್ಯೆಗಳಿಗೆ ಪರಿಹಾರ ಸಿಕ್ಕಾಂತಾಗುತ್ತದೆ. ಜಿಲ್ಲಾಧಿಕಾರಿಗಳು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಬಿಸಿ‌ ಮುಟ್ಟಿಸುವ ಕೆಲಸ ಮಾಡಿದರೆ ಎಚ್ಚೆತ್ತುಕೊಳ್ಳತ್ತಾರಾ ಜಿಲ್ಲಾಧಿಕಾರಿ ಯಾವ ರೀತಿ ಕ್ರಮ ವಹಿಸುತ್ತಾರೆ ಕಾದು ನೋಡಬೇಕಿದೆ.

 

[t4b-ticker]

You May Also Like

More From Author

+ There are no comments

Add yours