ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.8:
ಚಿತ್ರದುರ್ಗ ಜಿಲ್ಲಾ ಪಂಚಾಯತ್ ನವೆಂಬರ್-2022ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆರ್ಥಿಕ ಇಲಾಖೆ (ವೆಚ್ಚ) ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ಪಿ.ಸಿ.ಜಾಫರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಕೆ.ಡಿ.ಪಿ ಮಾಸಿಕ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
[t4b-ticker]
+ There are no comments
Add yours