ಹಾಸನ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ವಿಶೇಷ ಪೂಜೆ ನೆರವೇರಿಸಲಾಗಿದೆ. ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಐವರು ಪೂಜಾರಿಗಳಿಂದ ಸುಮಾರು 1 ಗಂಟೆಗೂ ಹೆಚ್ಚು ಕಾಲ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ವಿಶೇಷ ಪೂಜೆ ನೆರವೇರಿದೆ.
ಡಿಕೆ ಶಿವಕುಮಾರ್ ಬೆಂಗಳೂರು ನಿವಾಸದಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಈ ಪೂಜೆ ನಡೆದಿರುವುದು ಅವರ ಸಿಎಂ ಸ್ಥಾನದ ಆಕಾಂಕ್ಷೆಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಆಗುವ ಮುನ್ನ ಇದೇ ದೇವರಿಗೆ ಪೂಜೆ ಸಲ್ಲಿಸಿದ್ದರು.









