ಪ್ರಧಾನಿ‌ ಮೋದಿ ಯುವ ಸಮೂಹಕ್ಕಾಗಿ ಎಷ್ಟು ಲಕ್ಷ ಹುದ್ದೆ ಸೃಷ್ಟಿಸುತ್ತಾರಂತೆ ಗೊತ್ತೆ?

 

ನವದೆಹಲಿ ಜೂ.14 –  ದೇಶದಲ್ಲಿ ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ   ಖಾಲಿಯಿರುವಂತಹ  ೧೦ ಲಕ್ಷ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಖಡಕ್ ಸೂಚನೆ  ನೀಡಿದ್ದಾರೆ.

2024 ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಸಚಿವಾಲಯ ಮತ್ತು ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳಲ್ಲಿ ಸಮರೋಪಾದಿಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವಂತೆ ಸೂಚಿನೆ ನೀಡಿರಯವ ಹಿಂದೆ ಚುನಾವಣೆಗಾಗಿ ಎಂಬ ಮಾತಿದೆ.
2014 ರ ಲೋಕಸಭೆ ಚುನಾವಣೆಗೆ ಮುನ್ನ ತಾವು ಅಧಿಕಾರಕ್ಕೆ ಬಂದರೆ  ಪ್ರತಿ ವರ್ಷ ದೇಶದಲ್ಲಿ 2  ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದ  ನರೇಂದ್ರ ಮೋದಿ ಅವರ ಹೇಳಿಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಜೊತೆಗೆ ಪದೇ ಪದೇ ಕುಟುಕುತ್ತಿದ್ದರು.
ಇದೀಗ ಮುಂದಿನ ಒಂದೂವರೆ ವರ್ಷದಲ್ಲಿ 10  ಲಕ್ಷ ನೇರ ನೇಮಕಾತಿ ಮಾಡಿಕೊಳ್ಳುವಂತೆ ಸಚಿವಾಲಯಗಳಿಗೆ ಸೂಚನೆ ನೀಡುವ ಮೂಲಕ ವಿರೋಧ ಪಕ್ಷಗಳ ಟೀಕೆಗಳಿಂದ  ತಪ್ಪಿಸಿಕೊಳ್ಳುವ  ಪ್ರಯತ್ನ ಮಾಡಿದ್ದಾರೆ.

 

ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ತಮ್ಮ ಬಳಿ ಇರುವ ಮಾನವ ಸಂಪನ್ಮೂಲಗಳ ಬಗ್ಗೆ ಪರಿಶೀಲನೆ ನಡೆಸಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವಾಲಯ, ಮುಂದಿನ ಒಂದೂವರ ವರ್ಷದಲ್ಲಿ ದೊಡ್ಡ ಮಟ್ಟದಲ್ಲಿ ಸರ್ಕಾರಿ ನೇಮಕಾತಿಗೆ ಆದೇಶ ಮಾಡಿದ್ದಾರೆ. ಇದರಿಂದ ದೇಶದ ಯುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆ, ಮತ್ತು ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆ ಸೇರಿದಂತೆ ಇನ್ನಿತರೆ ಅದೀನ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುರುತಿಸಿ ಅವುಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಇದೆ.

[t4b-ticker]

You May Also Like

More From Author

+ There are no comments

Add yours