ಡಾ.ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ: ಡಿಸಿ ದಿವ್ಯ ಪ್ರಭು ಜಿ.ಆರ್.ಜೆ

 

ಡಾ.ಬಾಬು ಜಗಜೀವನ್‍ರಾಂ 116ನೇ ಜನ್ಮ ದಿನಾಚರಣೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್05:
ಉಪ ಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರು ಎಲ್ಲಾ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ್‍ರಾಂ ಅವರ 116ನೇ ಜನ್ಮ ದಿನಾಚರಣೆಯಲ್ಲಿ ಡಾ.ಬಾಬು ಜಗಜೀವನ್‍ರಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಡಾ.ಬಾಬು ಜೀವನ್‍ರಾಂ ಅವರು ಹಲವಾರು ವಿಷಯಗಳಲ್ಲಿ ಬದಲಾವಣೆ ಹಾಗೂ ಬಹಳಷ್ಟು ಕ್ಷೇತ್ರಗಳಲ್ಲಿಯೂ ಬೆಳೆವಣಿಗೆಗೆ ಶ್ರಮಿಸಿ ಹಸಿರು ಕ್ರಾಂತಿಯ ಹರಿಕಾರ ಎನಿಸಿಕೊಂಡಿದ್ದಾರೆ.  ಈ ಮೂಲಕ ದೇಶಕ್ಕೆ ಅಪಾರವಾದ ಕೊಡುಗೆ ನೀಡಿ, ನಮಗೆ ದಾರಿದೀಪವಾಗಿದ್ದಾರೆ ಎಂದರು.
ಮಹನೀಯರ ಜಯಂತಿ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಮಹನೀಯರ ತತ್ವ-ಆದರ್ಶಗಳನ್ನು ನಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯವಿದೆ. ಮಹನೀಯರ ತತ್ವ-ಸಿದ್ದಾಂತ, ಕ್ರಾಂತಿಕಾರಕ ಚಿಂತನೆಗಳನ್ನು ಎಲ್ಲರಿಗೂ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿ ಕೂಡ ಹೌದು ಎಂದು ಹೇಳಿದ ಅವರು, ಬಾಬು ಜೀವನ್‍ರಾಂ ಅವರ ಜಯಂತಿಯ ಶುಭಾಶಯ ಕೋರಿದರು.
ಕರ್ನಾಟಕ ವಿಧಾನಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಡಾ.ಬಾಬು ಜಗಜೀವನ್‍ರಾಂ  ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ತಹಶೀಲ್ದಾರ್ ಡಾ.ನಾಗವೇಣಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಾಳ್, ಸಹಾಯಕ ನಿರ್ದೇಶಕ ಓ. ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ದಲಿತ ಸಮುದಾಯದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

[t4b-ticker]

You May Also Like

More From Author

+ There are no comments

Add yours