ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ, ಬಿಜೆಪಿ ಎಸ್ಟಿ ಮೋರ್ಚಾದಿಂದ ಮದಕರಿನಾಯಕ ಪ್ರತಿಮೆಗೆ ಮಾಲಾರ್ಪಣೆ

 

ಚಿತ್ರದುರ್ಗ: ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಹುದ್ದೆ ರಾಷ್ಟ್ರಪತಿ ಸ್ಥಾನ ಅಲಂಕರಿಸಿರುವುದಕ್ಕೆ ಬಿಜೆಪಿ.ಜಿಲ್ಲಾ ಎಸ್ಟಿ ಮೋರ್ಚಾ   ವತಿಯಿಂದ  ರಾಜವೀರ ಮದಕರಿನಾಯಕನ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ಬಿಜೆಪಿ ಎಸ್ಟಿ.ಮೋರ್ಚಾ ಜಿಲ್ಲಾಧ್ಕಕ್ಷ ಶಿವಣ್ಣನಾಯಕ ಮದಕರಿನಾಯಕನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತ ಸರಳತೆಯ ಮೂಲಕ ದೇಶದ ಜನರ ಮನಗೆದ್ದಿರುವ ದ್ರೌಪದಿ ಮುರ್ಮು ಅತ್ಯುನ್ನತ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿರುವುದು ದೇಶದ ಇತಿಹಾಸದಲ್ಲಿಯೇ ಸುರ್ವಣಾಕ್ಷರದಲ್ಲಿ ಬರೆದಿಡುವಂತಾಗಿದೆ. ಬುಡಕಟ್ಟು ಸಮುದಾಯದ ಮಹಿಳೆಯನ್ನು ಗುರುತಿಸಿ ರಾಷ್ಟ್ರಪತಿಯನ್ನಾಗಿ ಮಾಡುವ ಮೂಲಕ ದೇಶದ ಪ್ರಧಾನಿ ನರೇಂದ್ರಮೋದಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಆಶಯದಂತೆ ಸಾಮಾಜಿಕ ನ್ಯಾಯ ಕಲ್ಪಿಸಿದ್ದಾರೆ. ಪಕ್ಷಕ್ಕಾಗಿ ನಿಷ್ಟೆ ಮತ್ತು ಪ್ರಾಮಾಣಿಕತೆಯಿಂದ ದುಡಿದವರು ಎಲ್ಲಿಯೆ ಮೂಲೆಯಲ್ಲಿರಲಿ ಅಂತಹವರನ್ನು ಗುರುತಿಸಿ ಅಧಿಕಾರ ನೀಡುವುದೇ ಬಿಜೆಪಿ.ತತ್ವ ಸಿದ್ದಾಂತ ಎಂದು ಹೇಳಿದರು.
ಇನ್ನು ಒಂಬತ್ತು ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸಾಧನೆಗಳನ್ನು ಪ್ರತಿ ಬೂತ್‍ನಲ್ಲಿ ಮನೆ ಮನೆಗೆ ಮುಟ್ಟಿಸುವ ಮೂಲಕ ಮತ್ತೆ ರಾಜ್ಯದಲ್ಲಿ ಬಿಜೆಪಿ.ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಪದಾಧಿಕಾರಿಗಳಲ್ಲಿ ವಿನಂತಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಜನಪರ ಯೋಜನೆಗಳುಳ್ಳ ಕರಪತ್ರಗಳನ್ನು ಪ್ರತಿ ಬೂತ್ ಮತ್ತು ಮಂಡಲಗಳಲ್ಲಿ ಪ್ರಚಾರ ಮಾಡುವ ಮೂಲಕ ಪಕ್ಷದ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಳ್ಳುವಂತೆ ಸೂಚಿಸಿದರು.
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವೀರವನಿತೆ ಒನಕೆ ಓಬವ್ವ ಪ್ರತಿಮೆಗೂ ಮಾಲಾರ್ಪಣೆ ಮಾಡಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗಳಿಗೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಫೋಟೋಗಳನ್ನು ನೀಡಿದರು. ಎಸ್ಟಿ‌ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಾಪೇಶ್ ನಾಯಕ,
ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲ್, ನರೇಂದ್ರಹೊನ್ನಾಳ್, ಸೋಮೇಂದ್ರ, ಜೈರಾಮ್ ಸೇರಿದಂತೆ ಎಸ್ಟಿ.ಮೋರ್ಚಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

[t4b-ticker]

You May Also Like

More From Author

+ There are no comments

Add yours