ಬೆಂಗಳೂರು: ಬರಪೀಡಿತ ಪ್ರದೇಶಗಳ ರೈತರಿಗೆ ತಲಾ 5,000 ರೂಪಾಯಿಗಳ ಪರಿಹಾರವನ್ನು ಎರಡು ಕಂತುಗಳಲ್ಲೂ ಡಿಸೆಂಬರ್ 1ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ತಿಳಿಸಿದರು.




ವಿಕಾಸಸೌಧದಲ್ಲಿ ಜಿವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು, ಡಿಡಿಎಲ್ಆರ್ಗಳು, ಉಪ ವಿಭಾಗಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕೈಗೊಂಡ ಕ್ರಮಗಳನ್ನು ವಿವರಿಸಿದರು.ಲ್ಲಾಧಿಕಾರಿಗಳು, ಡಿಡಿಎಲ್ಆರ್ಗಳು, ಉಪ ವಿಭಾಗಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕೈಗೊಂಡ ಕ್ರಮಗಳನ್ನು ವಿವರಿಸಿದರು.

ಎಲ್ಲಾ ರೈತರಿಗೆ ಎರಡೂ ಕಂತುಗಳಲ್ಲಿ ಹಣ
ಬರ ಪರಿಹಾರ: ಎರಡೂ ಕಂತು ಡಿಸೆಂಬರ್ 1ರೊಳಗೆ ರೈತರಿಗೆ ನೀಡುವ ಪರಿಹಾರವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. ಗ್ರೀನ್ ಲಿಸ್ಟ್ನಲ್ಲಿರುವ ಎಲ್ಲಾ ರೈತರಿಗೆ ಎರಡೂ ಕಂತುಗಳು ಡಿಸೆಂಬರ್ 1ರೊಳಗೆ ಖಾತೆಗೆ ತಲುಪಲಿವೆ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಕೆಲವು ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದರಿಂದ ಉಂಟಾಗಿದ್ದ ಗೊಂದಲವನ್ನು ಈಗ ಪೂರ್ಣವಾಗಿ ನಿವಾರಿಸಲಾಗಿದೆ ಎಂದರು.
