ಬೆಂಗಳೂರು, ಜ.15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ ಬೆನ್ನಲ್ಲೇ ಇಲಾಖೆ ಅಲರ್ಟ್ ಆಗಿದೆ.
ಹೊಸ ಯೋಜನೆ ಏನು?
ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಈಗಾಗಲೇ ಉಚಿತವಾಗಿ ಪುಸ್ತಕ, ಶೂ, ಬಟ್ಟೆ ಮತ್ತು ಮಧ್ಯಾಹ್ನದ ಊಟವನ್ನು ನೀಡಲಾಗ್ತಿದೆ. ಇದರ ಜೊತೆಗೆ ಇನ್ಮುಂದೆ ಓರ್ವ ವಿದ್ಯಾರ್ಥಿಗೆ 6 ನೋಟ್ ಬುಕ್ಗಳನ್ನೂ ಇಲಾಖೆ ನೀಡಲಿದೆ. ಹಾಗೆಯೇ ವಾರದ ಐದು ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕೂಡ ಇರಲಿದೆ. ಜನವರಿಯಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭದ ಜೊತೆಗೆ ಯಾವುದೇ ಶುಲ್ಕಗಳು ಇಲ್ಲದಿರುವ ಬಗ್ಗೆ ಪಾಲಕರಿಗೆ ಮನವರಿಕೆ ಮಾಡಲು ಕ್ಯಾಂಪೇನ್ನ ಕೂಡ ಇಲಾಖೆ ಆರಂಭಿಸಿದೆ.






