ಶಾಲೆಗಳು ಕೋವಿಡ್ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಹುಷರ್: ಶಿಕ್ಷಣ ಸಚಿವ ಸುರೇಶ್ ಕುಮಾರ್

 

ಧಾರವಾಡ: ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಕರೊನಾ ಹೆಸರಿನಲ್ಲಿ ಶುಲ್ಕವನ್ನು ಸಂಗ್ರಹಣೆ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ ಕಳವಳ ವ್ಯಕ್ತಪಡಿಸಿದರು.

ಗುರುವಾರ ಧಾರವಾಡ ತಾಲೂಕಿನ ಬಾಡ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ಕುರಿತು ವಿವರ ನೀಡಿದರು.

ಶಾಲೆಗಳಿಗೆ ಅಂತಹ ಯಾವುದೇ ಶುಲ್ಕ  ವಿಧಿಸಲು ಅವಕಾಶವಿಲ್ಲ.  ನಿಯಮಬಾಹಿರವಾಗಿ ಯಾವುದಾದರೂ ಶಿಕ್ಷಣ ಸಂಸ್ಥೆಗಳು ಶುಲ್ಕ ವಸೂಲಿ  ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು  ಎಚ್ಚರಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮಲ್ಲಿ ದುಡಿಯುತ್ತಿರುವ ಶಿಕ್ಷಕರು ಹಾಗೂ ಸಿಬ್ಬಂದಿಯ ಹಿತ ಕಾಯಬೇಕು.

ಇದೇ ವೇಳೆ ಶಾಲಾ ಮಕ್ಕಳಿಗೆ ನಿರ್ದಿಷ್ಟ ವ್ಯಕ್ತಿ ಅಥವಾ ವ್ಯಾಪಾರಿಗಳಲ್ಲಿ ಪಠ್ಯಪುಸ್ತಕ, ಸಮವಸ್ತ್ರ ಖರೀದಿಸಲು ಯಾವುದೇ ಕಾರಣಕ್ಕೂ ಸೂಚನೆ ನೀಡಬಾರದು ಎಂದು ಸಚಿವರು ಹೇಳಿದರು.

[t4b-ticker]

You May Also Like

More From Author

+ There are no comments

Add yours