ಏಕಲವ್ಯ ಪ್ರಶಸ್ತಿ: ಅರ್ಜಿ ಆಹ್ವಾನ ದಾಖಲೆಗಳ ಮಾಹಿತಿ ನೋಡಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.29:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹತೆಯುಳ್ಳ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಗುವುದು.

ಇದನ್ನೂ ಓದಿ: ಕಾನೂನು ಅಭಿರಕ್ಷಕ ಕಚೇರಿಯ ವಿವಿಧ ಹುದ್ದೆಗಳಿಗೆ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಜಿಲ್ಲೆಯ ಅರ್ಹ ಮತ್ತು ಆಸಕ್ತ ಕ್ರೀಡಾಪಟುಗಳು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 6 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣ, ಚಿತ್ರದುರ್ಗ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours