ಧರ್ಮಪುರ ಹೋಬಳಿಯ ಬೆಟ್ಟಗೊಂಡನಹಳ್ಳಿಯಲ್ಲಿ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪರಿಸರ ದಿನಾಚರಣೆ

 

 

 

 

ಹಿರಿಯೂರು :ಈಗಿನ ಕೊರೊನಾ ಪರಿಸ್ಥಿತಿಯಲ್ಲಿ ಆಮ್ಲಜನಕವನ್ನು ಹಣವನ್ನು ಕೊಟ್ಟು ಪಡೆಯುತ್ತಿದ್ದೇವೆ, ಆದ್ದರಿಂದ ಪ್ರತಿಯೊಬ್ಬ ಸದಸ್ಯರು ಸಸಿಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಗಿಡ ಮರಗಳನ್ನು ಬೆಳೆಸಿ ಸಂರಕ್ಷಣೆ ಮಾಡಬೇಕು, ಮನೆಗೊಂದು ಮರ, ಊರಿಗೊಂದು ವನ ನಿರ್ಮಾಣ ಆದರೇ ಮಾತ್ರ ನಾವೆಲ್ಲಾ ನೆಮ್ಮದಿಯಾಗಿ ಬದುಕಲು ಸಾದ್ಯ ಎಂಬುದಾಗಿ ಕೃಷಿ ಅಧಿಕಾರಿ ಮಹಾಂತೇಶ್ ತಿಳಿಸಿದರು.
ತಾಲ್ಲೂಕಿನ ಧರ್ಮಪುರ ಹೋಬಳಿಯ ಬೆಟ್ಟಗೊಂಡನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಹಿರಿಯೂರು ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಂಗವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾಂಕೇತಿಕ ವಾಗಿ ಕಲ್ಪವೃಕ್ಷ ಗಿಡಗಳನ್ನು ನೆಡುವ ಮೂಲಕ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಶಾಲಾ ಮುಖ್ಯ ಉಪಾಧ್ಯಾಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯದ ಮೇಲ್ವಿಚಾರಕರು, ಒಕ್ಕೊಟದ ಅಧ್ಯಕ್ಷರು, ಸಂಘದ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours