ವೇಣೂರು: ಸಹಕಾರ ಚಳುವಳಿಯ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 2025-26ನೇ ಸಾಲಿನಲ್ಲಿ ರಾಜ್ಯ ಸಹಕಾರಿ ಯೂನಿಯನ್ ಲಿಮಿಟೆಡ್ ನೇತೃತ್ವದಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ವಿದ್ಯಾರ್ಥಿಗಳಾದ ೧೦ನೇ ತರಗತಿಯ ಅನ್ವಿತಾ ಎ ಹಾಗೂ ಶ್ರೀನಿಕಾ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತ ವಿದ್ಯಾರ್ಥಿಗಳನ್ನು ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ, ಶಾಲಾಭಿವೃದ್ಧಿ ಕಾರ್ಯಾಧ್ಯಕ್ಷರು ಮತ್ತು ಸದಸ್ಯರು ಅಭಿನಂದಿಸಿದ್ದಾರೆ.





