ಎಸ್ಸೆಸ್ಸೆಲ್ಸಿ ಫಲಿತಾಂಶ:ರಾಜ್ಯಕ್ಕೆ ಚಿತ್ರದುರ್ಗ ಪ್ರಥಮ

 

ಎಸ್ಸೆಸ್ಸೆಲ್ಸಿ ಫಲಿತಾಂಶ: ಚಿತ್ರದುರ್ಗ ಪ್ರಥಮ

ಪ್ರಜಾವಾಣಿ ವಾರ್ತೆ

ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ಶೇ 96.8 ರಷ್ಟು ದಾಖಲೆಯ ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.

2021-22ನೇ ಸಾಲಿನಲ್ಲಿ ಶೇ 94.31 ಫಲಿತಾಂಶ ಪಡೆದ ಜಿಲ್ಲೆ ರಾಜ್ಯದಲ್ಲಿ ನಾಲ್ಕನೇ ಸ್ಥಾನ ಪಡೆದಿತ್ತು. ಈ ವರ್ಷ ಶೇ 2.5ರಷ್ಟು ಫಲಿತಾಂಶ ಸುಧಾರಿಸಿದ್ದು, ಉತ್ತಮ ಸ್ಥಾನಕ್ಕೆ ಏರಿದೆ. 2019- 20ರಲ್ಲಿ ಶೇ 88.66 ಹಾಗೂ 2020-21ರಲ್ಲಿ ಶೇ 100 ರಷ್ಟು ಫಲಿತಾಂಶ ದಾಖಲಿಸಿತ್ತು.

ಜಿಲ್ಲೆಯಲ್ಲಿ 23,428 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ವಿಷಯವಾರು ಪರಿಣಿತರನ್ನು ಗುರುತಿಸಿ ವಿಶೇಷ ಕಾರ್ಯಾಗಾರಗಳನ್ನು ಏರ್ಪಡಿಸಲಾಗಿತ್ತು. ಅಧ್ಯಯನ ಸಾಮಗ್ರಿ, ಪರೀಕ್ಷಾ ಉತ್ತೀರ್ಣಕ್ಕೆ ಅಗತ್ಯ ಸಾಮಗ್ರಿಗಳನ್ನು ಸಿದ್ಧಪಡಿಸಿ ಮಕ್ಕಳಿಗೆ ನೀಡಲಾಗಿತ್ತು. ಪರೀಕ್ಷಾ ಭಯ ನಿವಾರಣೆಗೆ ಮಕ್ಕಳೊಂದಿಗೆ ಸಂವಾದ ನಡೆಸಲಾಗಿತ್ತು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮನಾಥ್ ಮಾತನಾಡಿ, ಶೇಕಡಾ 83.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ 8,35,102 ಜನ ವಿದ್ಯಾರ್ಥಿಗಳ ಹಾಜರು ಆಗಿದ್ದರು. 7,00,619 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ: ಗ್ರಾಮೀಣ ಭಾಗದಲ್ಲಿ ಶೇ.87 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಗರ ಪ್ರದೇಶದ ಮಕ್ಕಳಿಗಿಂತ ಗ್ರಾಮೀಣ ಪ್ರದೇಶದಲ್ಲಿನ ಹೆಚ್ಚಿನ ಫಲಿತಾಂಶ ಲಭ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಶೇ.87 ಹಾಗೂ ನಗರ ಪ್ರದೇಶದಲ್ಲಿ ಶೇ.79 ಫಲಿತಾಂಶ ಸಿಕ್ಕಿದೆ. ಸರ್ಕಾರಿ ಶಾಲೆಗಳಲ್ಲಿ ಶೇಕಡ 86.74 ಉತ್ತಮ ಫಲಿತಾಂಶ ಲಭ್ಯವಾಗಿದೆ. ಅನುದಾನ ರಹಿತ ಶಾಲೆಗಳಲ್ಲಿ ಶೇ.90.89 ಫಲಿತಾಂಶ ಲಭ್ಯವಾಘಿದೆ. ಅನುದಾನಿತ ಶಾಲೆಯಲ್ಲಿ 85.64% ಫಲಿತಾಂಶ ಸಿಕ್ಕಿದೆ. ಕನ್ನಡದಲ್ಲಿ 14,983 ವಿದ್ಯಾರ್ಥಿಗಳು 125 ಅಂಕ ಪಡೆದಿದ್ದಾರೆ.

  • ನಾಲ್ಕು ವಿದ್ಯಾರ್ಥಿಗಳು ಶೇ.100 ಫಲಿತಾಂಶ: (625 ಕ್ಕೆ 625 ಅಂಕ ಟಾಪರ್ಸ್‌).
  • 625- ಭೂಮಿಕ ಪೈ, ನ್ಯೂ ಮೆಕಾಲೆ ಇಂಗ್ಲೀಷ್ ಸ್ಕೂಲ್, ಹೊಸೂರು ರೋಡ್ , ಬೆಂಗಳೂರು
  • 625 – ಯಶಸ್ಸ್ ಗೌಡ, ಬಾಲಗಂಗಾಧರ ಸ್ವಾಮಿ ಹೈಸ್ಕೂಲ್ ಚಿಕ್ಕಬಳ್ಳಾಪುರ
  • 625 – ಅನುಪಮ ಶ್ರೀಶೈಲ್ ಹಿರಿಹೋಳಿ, ಶ್ರೀಕಂಠೇಶ್ವರ ಪ್ರೌಢಶಾಲೆ, ಸೌದತ್ತಿ, ಬೆಳಗಾವಿ ಜಿಲ್ಲೆ
  • 625- ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್, ಆಕ್ಸ್‌ಫರ್ಡ್‌ ಇಂಗ್ಲೀಷ್‌ ಹೈಸ್ಕೂಲ್, ಮುದ್ದೆಬೀಹಾಳ

ಸರ್ಕಾರಿ ಶಾಲೆಯಲ್ಲಿ ಉತ್ತಮ ಫಲಿತಾಂಶ: 61,003 ವಿದ್ಯಾರ್ಥಿಗಳು ಶೇ.90ರಿಂದ 100 ಶೇಕಾಡವಾರು ಅಂಕ ಪಡೆದಿದ್ದಾರೆ. 1,517 ಸರ್ಕಾರಿ ಶಾಲೆಗಳು 100ಕ್ಕೆ 100 ರಿಸರ್ಲ್ಟ್ ಪಡೆದಿದ್ದಾರೆ. ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಇಲ್ಲ. ಆದರೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಸೇರಿ ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶವಾಗಿದೆ.

ಚಿತ್ರದುರ್ಗ ಪ್ರಥಮ, ಯಾದಗಿರಿ ಕೊನೆಯ ಸ್ಥಾನ: ಚಿತ್ರದುರ್ಗ ಜಿಲ್ಲೆ ಹೆಚ್ಚಿನ ಫಲಿತಾಂಶ ಲಭ್ಯವಾಗಿದ್ದು, ಶೇ.96 ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ.
ಮಂಡ್ಯ ಜಿಲ್ಲೆಯು ಶೇಕಡಾ 96.74 ಫಲಿತಾಂಶ ಪಡೆದಿದ್ದು, 2ನೇ ಸ್ಥಾನ ಪಡೆದಿದೆ. ಹಾಸನ 96,.68 ಸ್ಥಾನದೊಂದಿಗೆ 3ನೇ ಸ್ಥಾನ ಪಡೆದಿದೆ. ಉಳಿದಂತೆ ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆಯಿದ್ದು, ಶೇ.75.49 ಫಲಿತಾಂಶವನ್ನು ಪಡೆದುಕೊಂಡಿದೆ.

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ:
ಪರೀಕ್ಷಾ ಫಲಿತಾಂಶ ನೋಡಲು ವಿದ್ಯಾರ್ಥಿಗಳು ಅನುಸರಿಸಬೇಕಾದ ಮಾಹಿತಿ ಇಲ್ಲಿದೆ.
ಅಧಿಕೃತ ವೆಬ್‌ಸೈಟ್ www.karresults.nic.in ಗೆ ಭೇಟಿ
ಮುಖಪುಟದಲ್ಲಿ ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಒತ್ತಿರಿ
ತೆರೆಯುವ ಹೊಸ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಟ್ಟುಕೊಳ್ಳಿ

 

[t4b-ticker]

You May Also Like

More From Author

+ There are no comments

Add yours