ಸರ್ವೋತ್ತಮ ಸೇವಾ ಪ್ರಶಸ್ತಿ: ಆನ್‍ಲೈನ್ ಮೂಲಕ ನಾಮನಿರ್ದೇಶನಕ್ಕೆ ಸೂಚನೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.21:
2023ನೇ ಸಾಲಿನಲ್ಲಿ ಸವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸಲು ಇಚ್ಛಿಸುವ ಸರ್ಕಾರಿ ಅಧಿಕಾರಿ, ನೌಕರರು ಹಾಗೂ ಸಾರ್ವಜನಿಕರು ನಾಮನಿರ್ದೇಶನಗಳನ್ನು ಇದೇ ಮಾರ್ಚ್ 31ರೊಳಗಾಗಿ ಆನ್‍ಲೈನ್ ಮೂಲಕ ಮಾತ್ರವೇ ಸಲ್ಲಿಸಲು ಸೂಚಿಸಲಾಗಿದೆ.
ರಾಜ್ಯ ಸರ್ಕಾರವು ಅತ್ಯುನ್ನತ ಸೇವೆಗೈದ, ಸಾಧನೆಗೈದ ರಾಜ್ಯ ಸರ್ಕಾರಿ ಅಧಿಕಾರಿ, ನೌಕಕರಿಗೆ (ಗ್ರೂಪ್ ಎ,ಬಿ,ಸಿ ಮತ್ತು ಡಿ) “ಸರ್ವೋತ್ತಮ ಸೇವಾ ಪ್ರಶಸ್ತಿ” ನೀಡಲು ತೀರ್ಮಾನಿಸಿದ್ದು, ಚಿತ್ರದುರ್ಗ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾ, ರಾಜ್ಯಮಟ್ಟದ ಪ್ರಶಸ್ತಿ ಆಯ್ಕೆಗೆ ನಾಮ ನಿರ್ದೇಶನಗಳನ್ನು ಆನ್‍ಲೈನ್ ಜಾಲತಾಣ https://dparar.karnataka.gov.in/ ಅಥವಾ https://sarvothamaawards.karnataka.gov.in ದ ಮೂಲಕ ಮಾತ್ರವೇ ಸಲ್ಲಿಸಲು ಅವಕಾಶ ನೀಡಲಾಗಿದೆ.
2023ನೇ ಸಾಲಿನಲ್ಲಿ ಸವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸಲು ಇಚ್ಛಿಸುವ ಸರ್ಕಾರಿ ಅಧಿಕಾರಿ, ನೌಕರರು ಹಾಗೂ ಸಾರ್ವಜನಿಕರು ನಾಮನಿರ್ದೇಶನಗಳನ್ನು ನಿಗಧಿತ ಮಾರ್ಚ್ 31ರೊಳಗಾಗಿ ಆನ್‍ಲೈನ್ ಮೂಲಕ ಮಾತ್ರವೇ ಸಲ್ಲಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours