ಪಾಕಿಸ್ತಾನದ ಕರಾಚಿಯಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಮಕ್ಕಳು ಸೇರಿ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದಾರೆ. ಓಲ್ಡ್ ಸೋಲ್ಜರ್ ಬಜಾರ್ ಪ್ರದೇಶದ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಫೋಟ ಸಂಭವಿಸಿದೆ, ಪಾಕಿಸ್ತಾನದಲ್ಲಿ ಇಂದು ರಂಜಾನ್ ಮೊದಲ ದಿನವನ್ನು ಆಚರಿಸಲಾಗುತ್ತಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ ಅನಿಲ ಸೋರಿಕೆಯಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.





