ಸರ್ಕಾರ ಜಮೀನು ಒಡೆದ ರೈತರಿಗೆ ಸಿಹಿ ಸುದ್ದಿ , ಮತ್ತೊಂದು ದೊಡ್ಡ ಅವಕಾಶ?

 

 

 

 

ಬೆಂಗಳೂರು: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಮತ್ತೆ ರಾಜ್ಯ ಸರ್ಕಾರ ಕಾಲಾವಕಾಶ ವಿಸ್ತರಿಸಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

 

 

ಕಂದಾಯ ಸಚಿವ ಆರ್. ಅಶೋಕ್ ಈ ಕುರಿತು ಮಾಹಿತಿ ನೀಡಿದ್ದು, 2005, ಜನವರಿ 1ಕ್ಕಿಂತಲೂ ಪೂರ್ವದಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವವರಿಗೆ ಇದು ಅನ್ವಯವಾಗಲಿದೆ. ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವುದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆ -1964ರ ಕಲಂ 94(ಎ)ರನ್ವಯ ಅವಕಾಶ ನೀಡಲಾಗಿದೆ. ನಮೂನೆ-57ರಲ್ಲಿ ಅರ್ಜಿಗಳನ್ನು ಸಲ್ಲಿಸಲು ಮೇ 31 ರ 2023 ರವರೆಗೆ ಅವಕಾಶ ನೀಡಲಾಗಿದೆ.

Farmers are allowed to take action

ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮಗೊಳಿಸಲು ಭೂ ಕಂದಾಯ ಕಾಯ್ದೆ 1964ರ ಕಲಂ 94 ಎ, 94 ಬಿ, 94ಎ (4) ರ ಅಡಿ ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸದವರಿಗೆ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿ, ಅವಧಿ ವಿಸ್ತರಿಸಲಾಗಿದೆ ಎಂದಿದ್ದಾರೆ.

[t4b-ticker]

You May Also Like

More From Author

+ There are no comments

Add yours