ಸಚಿವ ಸುಧಾಕರ್ ವಿರುದ್ದ FIR ದಾಖಲು ಏಕೆ ಗೊತ್ತೆ.

 

ಬೆಂಗಳೂರು:( Bangalore)  ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದ ಅಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್​ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: ksrtc ಬಸ್ ಲಾರಿ ಮಧ್ಯೆ ಭೀಕರ ಅಪಘಾತ ನಾಲ್ವರು ಸಾವು,

ಸುಬ್ಬಮ್ಮ ಎಂಬುವರಿಂದ ದೂರು ನೀಡಲಾಗಿದೆ. ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾಗಿರುವ ಸುಧಾಕರ್, ಮೋಸದಿಂದ ದಲಿತರ ಆಸ್ತಿ ಕಬಳಿಕೆ ಮಾಡಿದ್ದು, ಮನೆಯಲ್ಲಿದ್ದ ಮಗಳ‌ ಮೇಲೂ ಹಲ್ಲೆ ಮಾಡಿದ್ದಾರೆಂದು ಸುಬ್ಬಮ್ಮ ಆರೋಪಿಸಿದ್ದಾರೆ. ಹಾಗಾಗಿ ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ವಿರುದ್ಧ ಎಫ್​ಐಆರ್ ಹಾಕಲಾಗಿದೆ.​

ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದು, ಕೋರ್ಟ್​ನಲ್ಲಿ ಕೇಸ್ ಇದ್ದಾಗ ಗುಂಪು ಕಟ್ಟಿಕೊಂಡು ದೌರ್ಜನ್ಯವೆಸಗಿದ್ದಾರೆ. ಮಹಿಳೆಯರನ್ನು ಕರೆದೊಯ್ದು ಜೆಸಿಬಿ ಮೂಲಕ ಮನೆ ಕೆಡವಿರುವುದಾಗಿ ಆರೋಪ ಮಾಡಿದ್ದಾರೆ.

[t4b-ticker]

You May Also Like

More From Author

+ There are no comments

Add yours