ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರಿನಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷ ಬಿತ್ತುವ ಮಾತುಗಳನ್ನಾಡಿದ ಕಾರಣ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹಿಂದಿನ ಷರತ್ತುಗಳನ್ನು ಉಲ್ಲಂಘಿಸಿರುವ ಭಟ್ ಅವರಿಗೆ ಇದು ಗಂಭೀರ ಕಾನೂನು ಸಂಕಷ್ಟ ತಂದೊಡ್ಡಲಿದೆ. ವಿಕಸನ ಟಿವಿ ಮತ್ತು ಆಯೋಜಕರ ವಿರುದ್ಧವೂ ದೂರು ದಾಖಲಾಗಿದೆ.
ಇನ್ನು ಇದರ ಜತೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಈ ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಆಯೋಜಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ. ಜನವರಿ 12ರಂದು ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಕೋಮುದ್ವೇಷದ ವಿಚಾರಗಳು ಇತ್ತು ಎಂದು ಹೇಳಲಾಗಿದೆ. ಅವರು ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಮಾತುಗಳನ್ನು ಆಡಿದ್ದಾರೆ ಎಂದು ಹೇಳಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ವಿವಿಧ ಗಂಭೀರ ಸೆಕ್ಷನ್ಗಳ ಮೂಲಕ ದೂರು ದಾಖಲಿಸಲಾಗಿದೆ.





