ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ FIR ದಾಖಲು

 

ಬೆಂಗಳೂರು:ಚುನಾವಣೆ ಸಮೀಪಿಸುತ್ತಿದ್ದಂತೆ ನಿಜವಾದ ರಾಜಕಾರಣ ಪ್ರಾರಂಭವಾಗುತ್ತದೆ. ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಪ್ರತ್ಯರೋಪ  ಮಾಡವುದು ಸಹಜವಾಗಿದೆ. ಆದರೆ ಇಂತಹ   ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಬಾಲಕಿ  ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ  ಸದಾಶಿವನಗರ ಸ್ಟೇಷನ್  ಪೊಲೀಸರು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಬಲ್ಲ ಮೂಲಗಳಿಂದ  ತಿಳಿದುಬಂದಿದೆ.

ರಾಜ್ಯದಲ್ಲಿ ಮಗ ಅಧ್ಯಕ್ಷ ಆದಾಗಿನಿಂದ ಸಖತ್ ಆ್ಯಕ್ಟವಿ ಆಗಿದ್ದ ಯಡಿಯೂರಪ್ಪ ಎಂಪಿ ಟಿಕೆಟ್ ವಿಚಾರದಲ್ಲಿ ತನ್ನ ಅಪ್ತರಿಗೆ ಮಣೆ ಹಾಕಿದ್ದರು‌.  ಅವರ ನೇತೃತ್ವದಲ್ಲಿ  ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

[t4b-ticker]

You May Also Like

More From Author

+ There are no comments

Add yours