ಹ್ಯಾಟ್ರಿಕ್ ಗೆಲುವಿನ ನಂತರ ಭವ್ಯ ಕನ್ನಡ ಭವನಕ್ಕೆ ಮೊದಲ ಆದ್ಯತೆ:ಶಾಸಕ ಟಿ.ರಘುಮೂರ್ತಿ

 

 

 

 

ಚಳ್ಳಕೆರೆ-23 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಂತರ ನಗರದಲ್ಲಿ ಭವ್ಯ ಕನ್ನಡ ಭವನ ನಿರ್ಮಾಣ ಕಾರ್ಯಕ್ಕೆ ಮೊದಲ ಆದ್ಯತೆ ನೀಡುವೆ ಎಂದು ಶಾಸಕ ಟಿ‌.ರಘುಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.

ಅವರು ನಗರದ ಬಿಎಂ ಸರ್ಕಾರಿ ಮೈದಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಢ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆಗೆ ಮೆರುಗು ನೀಡುವ ನಿಟ್ಟಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಿಸಿದ ಗಡಿಭಾಗದ ಚಳ್ಳಕೆರೆಯಲ್ಲಿ ಕನ್ನಡ ಕಟ್ಟುವ ಕಾರ್ಯ ಮಾಡುವೆ. ಅನ್ಯಭಾಷೆ ಜೀವನ ಮಾಡಲು ಬೇಕು, ಜೀವನ ರೂಪಿಸಿಕೊಳ್ಳಲು ನಮ್ಮ ಕನ್ನಡ ಭಾಷೆಯೇ ಬೇಕು ಎಂಬುವುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಭಾಷೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಿ ಎಂದರು.

 

 

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಟಿ.ವೀರಭದ್ರಸ್ವಾಮಿ ಮಾತನಾಡಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವ ಇಂದಿನಿಂದ ಐದು ದಿನಗಳ ಕಾಲ ನಡೆಸಲಾಗುವುದು. ಕಾರ್ಯಕ್ರಮದಲ್ಲಿ ಕನ್ನಡ ಭಾಷೆ ಬೆಳೆವಣಿಗೆಗೆ ಸಂಬಂಧಪಟ್ಟಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮದೊಂದಿಗೆ ಸದಸ್ಯತ್ವ ನೊಂದಾವಣೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗಿದೆ.

ಪ್ರವಾಸಿ ಮಂದಿರದಿಂದ ಭವ್ಯ ಮೆರವಣಿಗೆಯೊಂದಿಗೆ ತಾಯಿ ಭುವನೇಶ್ವರಿ ಭಾವಚಿತ್ರ, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಕನ್ನಡಕ್ಕೆ ಮೆರಗು ನೀಡಿವೆ. ತಾಲ್ಲೂಕಿನಾದ್ಯಂತ ಕನ್ನಡ ಸಾಹಿತ್ಯ ಪರಿಷತ್ ಚುಟುವಟಿಕೆಯನ್ನು ಸಮಾರೋಪಾದಿಯಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ದತೆಯನ್ನು ನಡೆಸಲಾಗುತ್ತಿದೆ. ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರಗಳಾದ ಕನ್ನಡ ಸಾಹಿತ್ಯಕ್ಕೆ ಮೆರಗುತಂದ ತರಾಸು ನಾಡು ತಳಕು, ನಾಯಕನಹಟ್ಟಿ, ಕಸಬಾ ಹೋಬಳಿಗಳಲ್ಲಿ ಈಗಾಗಲೇ ಸಾಹಿತ್ಯ ಪರಿಷತ್‍ನ ಅಧ್ಯಕ್ಷರು, ಕಾರ್ಯದರ್ಶಿಗಳ ಆಯ್ಕೆ ನಡೆಸಲಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‍ಗೆ ಸದಸ್ಯರಾಗಲು ಇಚ್ಚಿಸುವವರು ಆಧಾರ ಕಾರ್ಡ್‍ನೊಂದಿಗೆ 450 ರೂ ಶುಲ್ಕವನ್ನು ಪಾವತಿಸಬೇಕು ಎಂದರು.

ತಹಶೀಲ್ದಾರ್ ಎನ್.ರಘುಮೂರ್ತಿ, ಬಿಇಒ ಸುರೇಶ್, ಟಿ.ಜೆ.ತಿಪ್ಪೇಸ್ವಾಮಿ, ತಾಲ್ಲೂಕು ಕಾರ್ಯದರ್ಶಿ ಪ್ರೊ.ಕೆ.ಚಿತ್ತಯ್ಯ, ಕಸಬಾ ಹೋಬಳಿ ಮಟ್ಟದ ಅಧ್ಯಕ್ಷ ಡಿ.ದಯಾನಂದ, ಕಾರ್ಯದರ್ಶಿ ಕೆಂಚವೀರನಹಳ್ಳಿ ಎನ್.ಮಲ್ಲೇಶ್, ಮೃತ್ಯುಂಜಯ, ಸೂರ್ಯಪ್ರಭಾ, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours