ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ಮೇವು ಸಾಗಾಟ ನಿಷೇಧ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.06:
ಚಿತ್ರದುರ್ಗ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಬರದ ತೀವ್ರತೆ ಅಧಿಕವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಬಹುದು. ಈ ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ಎಲ್ಲಾ ವಿಧದ ಹಸಿರು, ಒಣ ಹಾಗೂ ಸಂಸ್ಕರಿಸಿದ ಮೇವನ್ನು ಜಿಲ್ಲಾ ವ್ಯಾಪ್ತಿಯನ್ನು ಹೊರತುಪಡಿಸಿ ಹೊರ ಜಿಲ್ಲೆಗಳಿಗೆ ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧಿಸಿ ನವೆಂಬರ್ 2023ರಲ್ಲಿಯೇ ಆದೇಶ ಹೊರಡಿಸಿದೆ. ಈ ಆದೇಶಗಳನ್ನು ಉಲ್ಲಂಘಿಸಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ಯಾವುದೇ ರೂಪದಲ್ಲಿ ಮೇವು ಸಾಗಾಣಿಕೆ ಮಾಡಿದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51(ಬಿ) ಮತ್ತು ಕಲಂ 57ರ ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.
=========
[t4b-ticker]

You May Also Like

More From Author

+ There are no comments

Add yours