ಕಾಂಗ್ರೆಸ್ ಸೇರುತ್ತೇನೆ ಎಂದ ಬಿಜೆಪಿ ಮಾಜಿ ಶಾಸಕ , ಬಿಜೆಪಿ ತೊರೆಯಲು ಸಿದ್ದವಾದ ಮಾಜಿ ಸಿಎಂ

 

ರಾಜ್ಯ ಸುದ್ದಿ:  ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ‘ಕೈ’ ಹಿಡಿಯಲು ಸಜ್ಜಾಗಿದ್ದಾರೆ. ಉಡುಪಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪಕ್ಷ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಇದರ ಬೆನ್ನಲ್ಲೇ ಬೈಂದೂರಿನ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು ‘ಕೈ’ ಹಿಡಿಯಲು ಸಜ್ಜಾಗಿದ್ದಾರೆ.

ಈ ಬಗ್ಗೆ ಮಾತನಾಡಿದ ಸುಕುಮಾರ್ ಅವರು, ಬಿಜೆಪಿ ಪಕ್ಷ ಬೆಳೆಯಲು ಬಿಡುವುದಿಲ್ಲ. ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಅದರಂತೆ ನನಗೆ ಸೀಟು ಕೊಡದೆ ಅನ್ಯಾಯ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ಬಹಳಷ್ಟು ನೋವಾಗಿದೆ ಎಂದು ಹೇಳಿದ್ದಾರೆ.

ಓದಿ: ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

ಕೆಲವು ನಾಯಕರು ತನ್ನನ್ನ ಕಾಂಗ್ರೆಸ್ ಸೇರಲು ಹೇಳುತ್ತಿದ್ದರು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುವ ಧೃಢ ನಿರ್ಧಾರ ಮಾಡಿದ್ದೇನೆ. ಕರಾವಳಿಯಲ್ಲಿ ಹಿಂದುತ್ವದ ಹಿನ್ನೆಲೆ ಹೊರತುಪಡಿಸಿ ಬೇರೆಲ್ಲಾ ಕಡೆ ಬಿಜೆಪಿ ಹೆಸರು ಹಾಳು ಮಾಡಿಕೊಂಡಿದೆ. ಡಿ.ಕೆ ಶಿವಕುಮಾರ್ ಬಹಳಷ್ಟು ಬಾರಿ ಕರೆಮಾಡಿ ಆಹ್ವಾನ ನೀಡಿದ್ದಾರೆ.

ಈಗ ನಾನು ಡಿಕೆಶಿ ಅವರನ್ನ ಭೇಟಿಯಾಗಿ ಪಕ್ಷಕ್ಕೆ ಸೇರುವ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದ್ದೇನೆ ಎಂದು ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಅವರ ವಿರುದ್ಧ ಕಿಡಿಕಾರಿದ್ದಾರೆ. ಟಿಕೆಟ್ ನೀಡುವ ವಿಚಾರದಲ್ಲಿ ಸಂತೋಷ್ ಅವರು ನನಗೆ ಅವಮಾನ ಮಾಡಿದ್ದಾರೆಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಧ್ಯಕ್ಷ ಆಯ್ಕೆ ನಂತರ ನನ್ನ ನಿರ್ಧಾರ 

 ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನನಗೆ ಎಲ್ಲವನ್ನು ನೀಡಿದೆ. ನಾನು ಪಕ್ಷಕ್ಕೆ ಏನು ನೀಡಬೇಕೆಂಬುದನ್ನು ನೋಡಬೇಕಿದೆ.

ನನ್ನ ಮುಂದಿನ ನಿರ್ಧಾರ ಏನು ಎಂದು ಈಗಲೇ ಹೇಳುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಆಗುತ್ತಿದ್ದಂತೆಯೇ ಪತ್ರಿಕಾಗೋಷ್ಠಿ ಕರೆದು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ನನಗೂ ಹಳೆ ಮೈಸೂರು ಸೇರಿ ರಾಜ್ಯಾದ್ಯಂತ ಹಿತೈಷಿಗಳು, ಅಭಿಮಾನಿಗಳು ಇದ್ದಾರೆ ಎಂದು ಭಾವಿಸುವೆ. ಪಕ್ಷದ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುತ್ತಿದ್ದಂತೆ ನನ್ನ ಅಭಿಪ್ರಾಯ ತಿಳಿಸುತ್ತೇನೆ. ಈಗಲೇ ನಿರ್ಧಾರ ಹೇಳಿ ಪಕ್ಷಕ್ಕೆ ಮುಜುಗರ ಉಂಟುಮಾಡುವುದಿಲ್ಲ. ಆ ನಿರ್ಧಾರ ಏನೆಂಬುದನ್ನು ಈಗಲೇ ಹೇಳಲಾರೆ ಎಂದು ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಮಾಜಿ ಸಿಎಂ ಬಂಧನ ,ಅರೆಸ್ಟ್ ಆಗಿದ್ದೇಕೆ.

ಸದಾನಂದಗೌಡ ಅವರು ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದೆಲ್ಲಾ ರಾಜಕೀಯ ವಲಯದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.

[t4b-ticker]

You May Also Like

More From Author

+ There are no comments

Add yours