ಮಾಜಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ  ಅವರ ಕೇಸ್ ರದ್ದು ಮಾಡಿ ಹೈಕೋರ್ಟ್  ಆದೇಶ

 

 

 

 

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  (Madala Virupakshappa)
ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್  ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ ಎಂದು ಮಾಡಾಳ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್​, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಈ ಪ್ರಕರಣದಲ್ಲಿ ಕೇವಲ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಕೇಸ್ ಮಾತ್ರ ರದ್ದುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಆದೇಶ ಹೊರಡಿಸಿದೆ. ಆದರೆ, ಮಾಡಳು ವಿರೂಪಾಕ್ಷಪ್ಪ ಪುತ್ರ ಸೇರಿ ಇತರ ಆರೋಪಿಗಳ ವಿರುದ್ಧದ ಲೋಕಾಯುಕ್ತ ಪ್ರಕರಣದ ಕೇಸ್ ಮುಂದುವರೆಯಲಿದೆ.

 

 

ಲಂಚ ಕೇಸ್​ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ. ಅಲ್ಲದೇ ಪ್ರಕರಣದಿಂದಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಮಾಡಾಳ್​ ಮತ್ತೆ ರಾಜಕೀಯದತ್ತ ಮುಖ ಮಾಡುತ್ತಾರಾ ಎನ್ನುವುದೇ ಮುಂದಿರುವ ಕುತೂಹಲ.

ಪ್ರಕರಣ ಹಿನ್ನೆಲೆ

ಮಾರ್ಚ್ 2ರಂದು ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರ ಪುತ್ರ ಬೆಂಗಳೂರು ಜಲಮಂಡಳಿಯ ಚೀಫ್‌ ಅಕೌಂಟಿಂಗ್‌ ಆಫೀಸರ್‌ ಮಾಡಾಳ್‌ ಪ್ರಶಾಂತ್‌ ಅವರು 40 ಲಕ್ಷ ರೂ. ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಈ ವೇಳೆ ಪ್ರಶಾಂತ್‌ ಅವರಿಗೆ ಹಣ ಕೊಡಲು ಬಂದ ವ್ಯಕ್ತಿಗಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್‌) ಅಧ್ಯಕ್ಷರಾಗಿದ್ದ ಮಾಡಾಳ್‌ ವಿರುಪಾಕ್ಷಪ್ಪ ಅವರಿಗೆ ಸಂಬಂಧಪಟ್ಟ ಹಣವಾಗಿದೆ ಎಂದು ಹೇಳಿದ್ದರು. ಬಳಿಕ ಲೋಕಾಯುಕ್ತ ಅಧಿಕಾರಿಗಳು ವಿರುಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್​ ನಿವಾಸದ ಮೇಲೆ ದಾಳಿ ಮಾಡಿತ್ತು. ಬೆಂಗಳೂರಿನ ಮನೆ, ಕಚೇರಿ, ಚನ್ನೇಶಪುರ ಗ್ರಾಮದ ಮನೆಯಲ್ಲಿ ಕಾರ್ಯಚರಣೆ ನಡೆಸಿತ್ತು, ಈ ವೇಳೆ ಕೋಟಿ ಕೋಟಿ ಹಣ, ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿದ್ದವು.

[t4b-ticker]

You May Also Like

More From Author

+ There are no comments

Add yours