ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭರ್ಜರಿ ಎಂಟ್ರಿ

 

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ‌ ಪಕ್ಷಕ್ಕೆ ಗುಡ್ ಬೈ ಹೇಳುವ ಮೂಲಕ ಸಿಎಂ ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ (Purnima)ಮತ್ತು ಪತಿ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾದ ಮೊದಲ ಬಾರಿಗೆ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ  ಶನಿವಾರ ಬೆಳಗ್ಗೆ  10-30 ಗಂಟೆಗೆ ಆಗಮಿಸಲಿದ್ದಾರೆ.

ಅಕ್ಟೋಬರ್ 20 ರಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುನಾರ್ ಅವರ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ ಕೈ ಪಕ್ಷ ಸೇರಿದ್ದರು.
ಅವರ ಪತಿ ಡಿಟಿ ಶ್ರೀನಿವಾಸ್ ಗೆ (DT Srinivas) ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿದ್ದು  ಚುನಾವಣಾ ಕಣ ರಂಗೇರುತ್ತಿದೆ.  ಪತಿ ಶ್ರೀನಿವಾಸ್ ಜೊತೆ ಪೂರ್ಣಿಮಾ ಶ್ರೀನಿವಾಸ್ ಆಗಮಿಸಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
[t4b-ticker]

You May Also Like

More From Author

+ There are no comments

Add yours