ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗುಡ್ ಬೈ

 

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿಯ 2ನೇ ಪಟ್ಟಿ ಘೋಷಣೆಯ ನಂತ್ರ, ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಕೈ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಮಾಜಿ ಶಾಸಕ ಎಸ್.ಕೆ ಬಸವರಾಜನ್ ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ ನಡೆದಿದ್ದಾರೆ. S.K.Basavarajan

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಗಳ ಭಿನ್ನಮತ ಸ್ಪೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದಂತ ರಘು ಆಚಾರ್ ಪಕ್ಷದ ವಿರುದ್ಧ ನಿನ್ನೆಯೇ ಬಂಡಾಯವೆದ್ದಿದ್ದರು.chitradurga

ಈ ಬೆನ್ನಲ್ಲೆ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಚಿತ್ರದುರ್ಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನನಗೆ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡು ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ.

[t4b-ticker]

You May Also Like

More From Author

+ There are no comments

Add yours