ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಪಾಟೀಲ್ ಬೆಳಗ್ಗೆ 6.30 ರ ಸುಮಾರಿಗೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು, ತೀವ್ರ ಅನಾರೋಗ್ಯ ಉಂಟಾದ ಪರಿಣಾಮ ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.






