ರೈತರಿಂದ ಆ್ಯಪ್ ಮೂಲಕ ಸ್ವಯಂ ಬೆಳೆ ಸಮೀಕ್ಷೆ

 

 

 

 


ಚಿತ್ರದುರ್ಗ, ಆ.09:
2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯು ಆಗಸ್ಟ್ 7 ರಿಂದ ಜಾರಿಗೆ ಬಂದಿದ್ದು, ಈ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ರೈತರು ತಮ್ಮ ಅಂಡ್ರ್ಯಾಡ್ ಮೊಬೈಲ್ ಮೂಲಕ ಗೂಗಲ್ ಪ್ಲೇಸ್ಟೋರ್‍ನಲ್ಲಿ ಬೆಳೆ ಸಮೀಕ್ಷೆ 2020 ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಳ್ಳುವ ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೇ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೆ ನಂವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೇನಂ ಆಯ್ಕೆ ಮಾಡಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿಲು, ಆರ್‍ಟಿಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಎನ್‍ಡಿಆರ್‍ಎಫ್ ಮತ್ತು ಎಸ್‍ಟಿಆರ್‍ಎಫ್ ನಡಿ ಸಹಾಯಧನ ನೀಡಲು ಅಂದರೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸುವಲ್ಲಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೆ ಆಧಾರವಾಗಿಟ್ಟು ಸಿದ್ದಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು “ರೈತರ ಬೆಳೆ ಸಮೀಕ್ಷೆ ಆಪ್” ನಲ್ಲಿ ನಮೂದಿಸಲು ಕೋರಿದೆ.
ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿರುವ ವಿದ್ಯಾವಂತ ಯುವಕರು “ರೈತರ ಬೆಳೆ ಸಮೀಕ್ಷೆ ಆಪ್” ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ ತಮ್ಮ ಹಳ್ಳಿಯ ರೈತ ಸಮುದಾಯಕ್ಕೆ ಬೆಳೆಗಳನ್ನು ತಂತ್ರಾಂಶದ ಮೂಲಕ ದಾಖಲಿಸಲು ಸಹಕರಿಸಲು ಕೋರಿದೆ.
ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ಆಗಸ್ಟ್ 10 ರಿಂದ ಆಗಸ್ಟ್ 24ರೊಳಗೆ ಅಪ್‍ಲೋಡ್ ಮಾಡಲು ಕಾಲಾವಧಿ ನಿಗದಿಪಡಿಸಲಾಗಿದೆ. ರೈತರು ನಿಗದಿತ ಸಮಯದೊಳಗೆ ತಾವು ಬಳೆದ ಮಾಹಿತಿಯನ್ನು ಅಪ್‍ಲೋಡ್ ಮಾಡಲು ವಿನಂತಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೇ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

 

 

ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಮಾಹಿತಿಯನ್ನು ಅಪ್‍ಲೋಡ್ ಮಾಡದೇ ಇದ್ದ ಪಕ್ಷದಲ್ಲಿ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾಚಿತ್ರದೊಂದಿಗೆ “ರೈತರ ಬೆಳೆ ಸಮೀಕ್ಷೆ ಆಪ್” ನಲ್ಲಿ ರೈತರ ಬೆಳೆ ಸಮೀಕ್ಷೆ ಕಾಲಾವಧಿ ಆಗಸ್ಟ್ 24 ಮುಕ್ತಾಯವಾದ ನಂತರ ಮುಂದಿನ ದಿನಗಳಲ್ಲಿ ಅಪ್‍ಲೋಡ್ ಮಾಡಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

[t4b-ticker]

You May Also Like

More From Author

+ There are no comments

Add yours