ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಗೆ ಜಾಮೀನು ಮಂಜೂರು

 

ಚಿತ್ರದುರ್ಗ: ಮುರುಘಾ ಶರಣರ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್  ಅವರಿಗೆ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಭಾಗ್ಯ ಬಸವರಾಜನ್ ಪರ ವಕೀಲ ದಾವಣಗೆರೆಯ ರಾಮದಾಸ್ ವಾದ ಮಂಡಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಭಾಗ್ಯ ಪತಿ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರಿಗೆ ಹೈಕೋರ್ಟ್ ಕಳೆದ ವಾರ ಜಾಮೀನು ಮಂಜೂರು ಮಾಡಿತ್ತು. ಈಗ ಚಿತ್ರದುರ್ಗ ನ್ಯಾಯಾಲಯವು ಸೌಭಾಗ್ಯ ಅವರಿಗೆ ಜಾಮೀನು ಮಂಜೂರು ಮಾಡಿದೆ.

[t4b-ticker]

You May Also Like

More From Author

+ There are no comments

Add yours