ಜುಲೈ 18ರಂದು ಉಚಿತ ಹೃದಯ ತಪಾಸಣಾ ಶಿಬಿರ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ15:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿರಿಯೂರು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಇಂಡಿಯಾನಾ ಎಸ್.ಜೆ.ಎಂ ಹಾರ್ಟ್ ಸೆಂಟರ್ ಇವರ ಸಂಯುಕ್ತಾಶ್ರಯದಲ್ಲಿ ಇದೇ ಜುಲೈ18ರಂದು ಬೆಳ್ಳಿಗೆ 10 ರಿಂದ ಮಧ್ಯಾಹ್ನ 3 ರವರೆಗೆ ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಬಿ.ಪಿ, ಜಿ.ಆರ್.ಬಿ.ಎಸ್, ಇ.ಸಿ.ಜಿ, 2ಡಿ ಇಕ್ಹೋ ಮತ್ತು ಹೃದಯ ತಜ್ಞರೊಂದಿಗೆ ಸಮಾಲೋಚನೆ ಸೇರಿದಂತೆ ವಿವಿಧ ಸೌಲಭ್ಯಗಳು ಶಿಬಿರದಲ್ಲಿ ದೊರೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9513766445 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
======

[t4b-ticker]

You May Also Like

More From Author

+ There are no comments

Add yours