ಸ್ವಾತಂತ್ರ್ಯ ಹೋರಟಗಾರ ದೊರೆಸ್ವಾಮಿ ಇನ್ನಿಲ್ಲ.

 

ಬೆಂಗಳೂರು: ಕಳೆದ ಹಲವು ದಿನದಗಳಿಂದ ಚಿಕಿತ್ಸೆ ಪಡೆಯುತ್ತಿದ್ದ 104 ವರ್ಷದ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇಂದು‌ ನಿಧನರಾಗಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಾರೆ.

ದೊರೆಸ್ವಾಮಿ ನಿಧನದ ಸುದ್ದಿಯನ್ನು ಅವರ ಒಡನಾಡಿ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಫೇಸ್ಬುಕ್ ಪೋಸ್ಟ್ ಮೂಲಕ ಖಚಿತಪಡಿಸಿದ್ದಾರೆ. ‘ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿಯಿಂದ ಆರೋಗ್ಯ ಸ್ವಲ್ಪ ಹದಗೆಟ್ಟು ಇಂದು ಬೆಳಿಗ್ಗೆ ಉಸಿರಾಟಕ್ಕೆ ತೊಂದರೆ ಆಗಿತ್ತು. ತೀವ್ರ ನಿಗಾ ಘಟಕಕ್ಕೆ ಕರೆದುಕೊಂಡು ಬಂದ @@ ಹೊತ್ತಿಗೆ ಹೃದಯಾಘಾತ ಆಯಿತು’ ಎಂದು ರವಿಕೃಷ್ಣಾರೆಡ್ಡಿ ಹೇಳಿದ್ದಾರೆ.

ಎಚ್​.ಎಸ್.ದೊರೆಸ್ವಾಮಿ ಅವರ ಪೂರ್ತಿ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲದಲ್ಲಿ ಕನ್ನಡದದ ಜನಪ್ರಿಯ ಪತ್ರಿಕೆ ಎನಿಸಿದ್ದ ‘ಪೌರವಾಣಿ’ ವರದಿಗಾರರಾಗಿ ಜನಪ್ರಿಯರಾಗಿದ್ದರು. ಸಾಹಿತ್ಯ ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು. ಇತಿಹಾಸಕಾರ ರಾಮಚಂದ್ರ ಗುಹಾ ಅವರು ದೊರೆಸ್ವಾಮಿ ಅವರನ್ನು ಗೌರವಿಸುತ್ತಿದ್ದರು. ‘ದೊರೆಸ್ವಾಮಿ ಅಂದ್ರೆ ಕರ್ನಾಟಕದ ಸಾಕ್ಷಿಪ್ರಜ್ಞೆ’ ಎಂದು ಗುಹಾ ಬಣ್ಣಿಸಿದ್ದರು.

[t4b-ticker]

You May Also Like

More From Author

+ There are no comments

Add yours