ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ, ಟಾಕಿಂಗ್ ಲ್ಯಾಪ್‍ಟಾಪ್ ವಿತರಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾ.27:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ನಗರದ ತರಾಸು ರಂಗಮಂದಿರದ ಆವರಣದಲ್ಲಿ ಸೋಮವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಟ್ಟು 9 ಮಂದಿ ಅಂಗವಿಕಲ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಲಾಯಿತು.
ಯಂತ್ರಚಾಲಿತ ದ್ವಿಚಕ್ರ (ರೆಟ್ರೋಫಿಟ್‍ಮೆಂಟ್ ಸಹಿತ) ಯೋಜನೆಯಡಿ 4 ಮಂದಿ ದೈಹಿಕ  ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಹೊಲಿಗೆಯಂತ್ರ ಯೋಜನೆಯಡಿ 3 ಮಂದಿ ಶ್ರವಣದೋಷ ಅಂಗವಿಕಲತೆ ಹೊಂದಿರುವ ಅಂಗವಿಕಲರಿಗೆ ಹೊಲಿಗೆಯಂತ್ರ ಹಾಗೂ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಇಬ್ಬರು ದೃಷ್ಠಿದೋಷ ಹೊಂದಿರುವ ಅಂಗವಿಕಲರಿಗೆ ಟಾಕಿಂಗ್ ಲ್ಯಾಪ್‍ಟಾಪ್‍ಅನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಎಂಆರ್‍ಡಬ್ಲ್ಯೂ ಮೈಲಾರಪ್ಪ ಸೇರಿದಂತೆ ಅಂಗವಿಕಲ ಫಲಾನುಭವಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours