ಶಿಕ್ಷಣ ಕ್ಷೇತ್ರದ ಅಮೋಘ ಸಾಧನೆಯ ಪರಿಗಣನೆ, ಜ. 4ರಂದು ಮಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ
ಮಂಗಳೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸನಿಹದ ನಿಟ್ಟಡೆ ಕುಂಭಶ್ರೀ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಗಿರೀಶ್ ಕೆ.ಎಚ್. ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅಮೋಘ ಸಾಧನೆಗಾಗಿ ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ. ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ 2026ರ ಜ. 4ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ವೇದಿಕೆಯಲ್ಲಿ ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.
ಗ್ರಾಮೀಣ ಭಾಗದಲ್ಲಿ ಗುರುಕುಲ ಪದ್ದತಿ ಶಿಕ್ಷಣ ಒದಗಿಸಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿಗಳು ಈ ಶಾಲೆಗೆ ಲಭಿಸಿದೆ. ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಛಾಪನ್ನು ಬರೆದಿದೆ. ಈ ಎಲ್ಲಾ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.





