ನೈಟ್ಕ್ಲಬ್ನಲ್ಲಿ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಥೈಲ್ಯಾಂಡ್ ಗೆ ಪರಾರಿಯಾಗಿದ್ದ ಗೋವಾದ ರೋಮಿಯೋ ಲೇನ್ ನೈಟ್ಕ್ಲಬ್ ಮಾಲೀಕರನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಕ್ಲಬ್ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 25 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ದುರಂತದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಕ್ಲಬ್ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ರೋಮಿಯೋ ಲೇನ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಿದ್ದರು.






