ಆರು ತಿಂಗಳ ನಂತರ ಬೆಂಗಳೂರು-ಮಂಗಳೂರು-ಕಾರವಾರ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು ಸೇವೆ ಪುನರಾರಂಭಗೊಂಡಿದೆ. ಹಾಸನ-ಸಕಲೇಶಪುರ ಮಾರ್ಗದ ವಿದ್ಯುದೀಕರಣ ಕಾರ್ಯ ಮುಗಿದ ಕಾರಣ ಈ ಸೇವೆ ಮತ್ತೆ ಲಭ್ಯ. ಪ್ರಯಾಣಿಕರಿಗಾಗಿ ವಿಸ್ಟಾಡೋಮ್ ಕೋಚ್ಗಳನ್ನು ಪರಿಚಯಿಸಲಾಗಿದೆ, ಇದು ಕರಾವಳಿ ಮಾರ್ಗದ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಅನುವು ಮಾಡಿಕೊಡುತ್ತದೆ. ರೈಲ್ವೆ ಇಲಾಖೆಯ ಈ ನಿರ್ಧಾರದಿಂದ ಪ್ರಯಾಣಿಕರಲ್ಲಿ ಸಂತಸ ಮೂಡಿದೆ. ಯಶವಂತಪುರದಿಂದಲೇ ರೈಲು ಸಂಚಾರ ಮುಂದುವರಿಯಲಿದೆ.
ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಸಮಯ;
ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಸಮಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಕೊಂಡಿಲ್ಲ. ಸಂಚಾರ ಮಾರ್ಗದಲ್ಲೂ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ, ಆದರೆ ನಿಲ್ದಾಣದಲ್ಲಿ ನಿಲ್ಲುವ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿದೆ. ಯಶವಂತಪುರ ನಿಲ್ದಾಣದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಅಲ್ಲಿಂದ ಶ್ರವಣಬೆಳಗೊಳ ನಿಲ್ದಾಣದಲ್ಲಿ ನಿಲ್ಲುತ್ತದೆ. ರೈಲು ಹಾಸನ ಮತ್ತು ಸಕಲೇಶಪುರದಲ್ಲಿ ಹೆಚ್ಚು ಸಮಯ ನಿಲ್ಲುತ್ತದೆ.






